Monday, December 23, 2024

ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗುಳಿದ ನೀರಜ್ ಚೋಪ್ರಾ

ನವದೆಹಲಿ: ಟೋಕಿಯೊ ಒಲಿಂಪಿಕ್ ಚಾಂಪಿಯನ್‌, ಭಾರತದ ಜಾವೆಲಿನ್‌ ಸ್ಪರ್ಧಿ ನೀರಜ್‌ ಚೋಪ್ರಾ ಅವರು ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.

‘ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಗಾಯಗೊಂಡಿದ್ದರಿಂದ ನೀರಜ್ ಅವರು ಫಿಟ್ ಆಗಿಲ್ಲ. ಫಿಟ್ನೆಸ್ ಬಗ್ಗೆ ನಮಗೆ ಮಾಹಿತಿ ನೀಡಿದ್ದಾರೆ’ ಎಂದು ಐಒಎ ಪ್ರಧಾನ ಕಾರ್ಯದರ್ಶಿ ರಾಜೀವ್ ಮೆಹ್ತಾ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ ನೀರಜ್‌, ಬೆಳ್ಳಿ ಪದಕ ಜಯಿಸಿ ದಾಖಲೆ ನಿರ್ಮಿಸಿದ್ದರು.
ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾನುವಾರ ನಡೆದ ಫೈನಲ್‌ನಲ್ಲಿ ನೀರಜ್‌, ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಎಸೆಯುವ ಮೂಲಕ ಈ ಸಾಧನೆ ಮಾಡಿದ್ದರು. ಅವರು ಅರ್ಹತಾ ಸುತ್ತಿನಲ್ಲಿಯೂ ಎರಡನೇ ಸ್ಥಾನ ಪಡೆದು ಫೈನಲ್‌ ಪ್ರವೇಶಿಸಿದ್ದರು.

RELATED ARTICLES

Related Articles

TRENDING ARTICLES