Monday, December 23, 2024

ಮುಂದಿನ ಎಲೆಕ್ಷನ್‌ನಲ್ಲಿ ನಿಖಿಲ್ ಸ್ಪರ್ಧಿಸಲ್ಲ : ಹೆಚ್.​​​ಡಿ. ಕುಮಾರಸ್ವಾಮಿ

ಮಂಡ್ಯ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ರಾಜ್ಯದ ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಭಾರತೀನಗರಕ್ಕೆ ತೆರಳುತ್ತಿದ್ದ ಹೆಚ್ಡಿಕೆಯವರನ್ನು ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಡಿ.ಸಿ.ತಮ್ಮಣ್ಣ ಹಾಗೂ ನೂರಾರು ಜೆಡಿಎಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

ಬಳಿಕ ಮಾತನಾಡಿದ ಅವರು, ರಾಮನಗರ, ಚನ್ನಪಟ್ಟಣ ಹಾಗೂ ಇತರೇ ಕ್ಷೇತ್ರಗಳಲ್ಲಿ ನಿಖಿಲ್ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಅವರ ತಾಯಿ ಅನಿತಾ ಕುಮಾರಸ್ವಾಮಿ ಅವರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಸದ್ಯ ನಿಖಿಲ್ ಅವರು ಪಕ್ಷ ಸಂಘಟನೆಯಲ್ಲಿ ಮಾತ್ರ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಆದರೆ ನಿಖಿಲ್ ಯಾವುದೇ ಕಾರಣಕ್ಕೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES