Sunday, December 22, 2024

ಸರ್ಕಾರ ನಮಗೆ ಯಾಕಿಷ್ಟು ಹಿಂಸೆ ಕೊಡುತ್ತಿದೆ: ರಾಜಮಾತೆ ಪ್ರಮೋದಾದೇವಿ

ಮೈಸೂರು: ಮಂಡ್ಯದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸದಂತೆ ರಾಜವಂಶಸ್ಥೆ ಪ್ರಮೋದಾದೇವಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು  ಸರ್ಕಾರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬೇಬಿ ಬೆಟ್ಟದಲ್ಲಿ ಕಲ್ಲುಗಣಿಗಾರಿಕೆಯ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಾಜ ಮನೆತನಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ನಾವೇನೂ ಯಾರದೋ ಆಸ್ತಿ ಕಬಳಿಸಲು ಹೊರಟ್ಟಿದ್ದೇವೇ ಎಂಬ ರೀತಿ ಸರ್ಕಾರ ಯೋಚಿಸುತ್ತಿವೆ. ಇದು ನಮಗೆ ಸರ್ಕಾರಗಳು ಕೊಡುತ್ತಿರುವ ಕಿರುಕುಳ. ದೇಶದ ಬೇರೆ ಯಾವ ರಾಜಮನೆತನಗಳಿಗೂ ಆಸ್ತಿಯ ವಿಚಾರದಲ್ಲಿ ಅಲ್ಲಿನ ಸರಕಾರಗಳು ಇಷ್ಟು ತೊಂದರೆ ಕೊಟ್ಟಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಈ ವಿವಾದದ ಬಗ್ಗೆ ಮಾತನಾಡಿರುವ ಪ್ರಮೋದಾ ದೇವಿ ಒಡೆಯರ್, 1950ರ ಕಾಲದಿಂದ ಆ ಬೆಟ್ಟದ 1,650 ಎಕರೆ ಜಾಗ ನಮ್ಮದು. ಭಾರತ ಸರಕಾರದ ಜೊತೆ ಮೈಸೂರು ಸಂಸ್ಥಾನ ಮಾಡಿಕೊಂಡ ಆಸ್ತಿ ಹಂಚಿಕೆಯ ಪತ್ರದಲ್ಲಿ ಬೇಬಿ ಬೆಟ್ಟ ಇದೆ. ಇದು ಖಾಸಗಿ ಆಸ್ತಿ ಇದರಲ್ಲಿ ಟ್ರಯಲ್ ಬ್ಲಾಸ್ಟ್ ಮಾಡೋದು ಸರಿಯಲ್ಲ. ಟ್ರಯಲ್ ಬ್ಲಾಸ್ಟ್ ಗೆ ತಜ್ಞರು ಸರಕಾರಿ ಜಾಗ ಗುರುತಿಸಿಕೊಳ್ಳಬೇಕು ಎಂದರು.

ಇನ್ನು ಬೇಬಿ ಬೆಟ್ಟದ ಜಾಗವನ್ನು ಉದ್ದೇಶ ಪೂರ್ವಕವಾಗಿ ಬಿ ಖರಬ್ ಪಟ್ಟಿಗೆ ಸೇರಿಸಲಾಗಿತ್ತು. ಹೀಗಾಗಿ ಆ ಜಾಗದ ವಿಚಾರದಲ್ಲಿ ನಾನು ಕೋರ್ಟ್ ಗೆ ಹೋಗಿರಲಿಲ್ಲ. ಮೈಸೂರಿನ ಕುರುಬಾರಹಳ್ಳಿ ಬಿ ಖರಾಬ್ ಜಾಗದ ವಿವಾದದಲ್ಲಿ ಸುಪ್ರೀಂಕೋರ್ಟ್ ನಲ್ಲಿ ಅರಮನೆಗೆ ಜಯವಾಗಿದೆ. ನಮ್ಮ ಜಾಗದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡುವಾಗ ಕನಿಷ್ಠ ನಮ್ಮ ಅನುಮತಿ ಪಡೆಯಬೇಕಿತ್ತು. ಎಲ್ಲಾ ಗೊತ್ತಿದ್ದು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ. ಬೇಬಿ ಬೆಟ್ಟ ನಮ್ಮದು.

ಇನ್ನು ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸದಂತೆ ರಾಜವಂಶಸ್ಥೆ ಪ್ರಮೋದಾದೇವಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದು, ಬೇಬಿ ಬೆಟ್ಟದ 1600 ಎಕರೆ ಪ್ರದೇಶ, ರಾಜಮನೆತನಕ್ಕೆ ಸೇರಿದೆ ಎಂದರು.

RELATED ARTICLES

Related Articles

TRENDING ARTICLES