Monday, December 23, 2024

ಹವಾಮಾನ ವೈಪರಿತ್ಯದಿಂದಾಗಿ ಅಮರನಾಥ ಯಾತ್ರೆ ಸ್ಥಗಿತ

ಶ್ರೀನಗರ : ಹವಾಮಾನ ವೈಪರಿತ್ಯದಿಂದಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನ ಗುಹಾ ದೇಗುಲದ ಸುತ್ತಲಿನ ಪರ್ವತಗಳಲ್ಲಿ ಭಾರಿ ಮಳೆಯಾಗಿರುವುದರಿಂದ ಹೊಳೆಯಲ್ಲಿ ನೀರಿನ ಮಟ್ಟವೂ ಏರಿಕೆಯಾಗಿದೆ. ಹೀಗಾಗಿ ಯಾತ್ರಾರ್ಥಿಗಳನ್ನು ಪಂಚತಾರ್ಣಿ ಶಿಬಿರದಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ. ಮಳೆಯಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹವಾಮಾನ ಸುಧಾರಿಸಿದ ನಂತರ ಯಾತ್ರೆ ಪುನರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES