Thursday, December 26, 2024

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

ಬೆಂಗಳೂರು : ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳ ಕೆಲವೆಡೆ ಮತ್ತೆ ಮಳೆಯಾಗುತ್ತಿದೆ.

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ. ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ತುಸು ದುರ್ಬಲಗೊಂಡಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಚುರುಕುಗೊಂಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಇಂದು ಸಂಜೆಯ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES