Sunday, November 24, 2024

ಜಿಹಾದಿ ಮಾನಸಿಕತೆಗೆ ಕೊನೆಯೇ ಇಲ್ವಾ ಅನ್ನೋ ಪ್ರಶ್ನೆ ಕಾಡ್ತಿದೆ : ಸಿ.ಟಿ ರವಿ

ಬೆಂಗಳೂರು : ಜಿಹಾದಿ ಮಾನಸಿಕತೆಗೆ ಕೊನೆಯೇ ಇಲ್ವಾ ಅನ್ನೋ ಪ್ರಶ್ನೆ ಕಾಡ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರ್ ಒಬ್ಬ ಮಾನವೀಯ ಕಳಕಳಿ ಇರೋ ವ್ಯಕ್ತಿ. ಪ್ರಾಣಿಗೂ ಯಾವುದೇ ಸಮಸ್ಯೆ ಮಾಡದ ವ್ಯಕ್ತಿ ಆತ. ನಾನು ಶಬ್ದಗಳಲ್ಲಿ ಸಂತಾಪ ಸೂಚಿಸುವುದಿಲ್ಲ. ಜಿಹಾದಿ ಮಾನಸಿಕತೆಗೆ ಕೊನೆಯೇ ಇಲ್ವಾ ಅನ್ನೋ ಪ್ರಶ್ನೆ ಕಾಡ್ತಿದೆ. ನಾವು ಮಾಡ್ತಾನೆ ಇರ್ತೀವಿ, ಕಠಿಣ ಕ್ರಮ ತೆಗೆದುಕೊಳ್ಳಿ ನೋಡೋಣ ಅನ್ನೋ ಮನಸ್ಥಿತಿ ಅವರದ್ದು.ಕೇಂದ್ರದಲ್ಲಿ, ರಾಜ್ಯದಲ್ಲಿ ಎರಡೂ ಕಡೆ ನಾವೆ ಇದ್ರೂ ಏನೂ ಮಾಡಲಾಗ್ತಿಲ್ಲ ಎಂದರು.

ಅದಲ್ಲದೇ. ಕಾರ್ಯಕರ್ತರು ಅಸಹಾಯಕತೆ ತೋಡಿಕೊಳ್ತಿದ್ದಾರೆ‌. ಸಿಎಂ ಭೇಟಿ ಮಾಡಲು ಹೋಗ್ತಿದ್ದೇನೆ. ಚಂದ್ರು, ಹರ್ಷ, ಪ್ರವೀಣ್ ನಾಳೆ ಇನ್ಯಾರೋ.? ಕಾರ್ಯಕರ್ತರ ಭಾವನೆ ಜೊತೆಗೆ ನಾವೂ ಇದ್ದೇವೆ‌. ಕೇವಲ‌ ಅಧಿಕಾರ ಮಾಡಲು ಬಂದಿಲ್ಲ. ಅವರ ಭಾವನೆ ಜೊತೆಗೆ ನಾವೂ ನಿಲ್ತೇವೆ. ವ್ಯವಸ್ಥೆಯನ್ನ ಜಿಹಾದ್ ವಿರುದ್ಧ ಹೋರಾಟ ಮಾಡಲು ಅಣಿಗೊಳಿಸಬೇಕು. ಅಮರಾವತಿಯಲ್ಲಿ, ಉದಯ್ ಪುರದಲ್ಲಿ ನಡೆದ ಒಂದು ಘಟನೆಯ ಭಾಗ ಇದು. ಸಿದ್ದರಾಮಯ್ಯ ಕಾಲದಲ್ಲೂ ಸರಣಿ ಹತ್ಯೆ ನಡೆಯುತ್ತಿತ್ತು. ಈಗಲೂ ಅದೇ ರೀತಿ ನಡೆಯುತ್ತಿದೆ ಅನ್ನೋ ಆರೋಪ‌ ಇದೆ ಎಂದು ಹೇಳಿದರು.

ಇನ್ನು, ಹಿಂದೆ ಹಿಂದೂ ವಿರೋಧಿ ಸರ್ಕಾರವಿತ್ತು, ಈಗ ಹಿಂದೂ ಪರ ಸರ್ಕಾರ ಇದೆ. ಆದ್ರೂ ಹೀಗಾಗ್ತಿದೆ ಅನ್ನೋ ಆತಂಕ ಕಾರ್ಯಕರ್ತರದ್ದು. ನಾವು ಸಮರ್ಥನೆ ಮಾಡಿಕೊಳ್ಳೋದಿಲ್ಲ. ಜಿಹಾದ್ ಕಿತ್ತುಹಾಕಲು ನಾವು ಬದ್ದರಿದ್ದೇವೆ. ನಾವೀಗ ಆಕ್ಷನ್ ಮಾಡದಿದ್ರೆ ನಾವೇ ಹೊಣೆ ಹೊರಬೇಕಿತ್ತು. ಹಿಂದಿನ ಸರ್ಕಾರ ಓಟ್ ಬ್ಯಾಂಕ್‌ಗಾಗಿ ಓಲೈಕೆ ಮಾಡ್ತಿತ್ತು. ಆದ್ರೆ ನಾವು ಆ ರೀತಿ ಯಾವುದೇ ಓಲೈಕೆ ಇಲ್ಲ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಸಿಎಂ ಭೇಟಿ ಮಾಡಿ ಮನವಿ ಮಾಡುತ್ತೇನೆ. ಕಠಿಣ ಕ್ರಮ ಕೈಗೊಳ್ಳೋದ್ರ ಜೊತೆ, ಅಪರಾಧಿಗಳನ್ನ ಬಂಧಿಸಲು ಮನವಿ ಮಾಡ್ತೇನೆ ಎಂದರು.

RELATED ARTICLES

Related Articles

TRENDING ARTICLES