Thursday, December 26, 2024

ಬಿಜೆಪಿ ಯುವ ಮೋರ್ಚಾ ಪ್ರವೀಣ್​ ನೆಟ್ಟಾರು ಹತ್ಯೆ

ಮಂಗಳೂರು : ಬಿಜೆಪಿ ಯುವ ಮುಖಂಡನನ್ನು, ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ.

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿ ಚಿಕನ್​ ಅಂಗಡಿ ನಡೆಸುತ್ತಿದ್ದ, ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿರುವ ಪ್ರವೀಣ್​ ನೆಟ್ಟಾರು ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಗುಂಪು ಹಲ್ಲೆಗೊಳಗಾಗಿ ಮೃತಪಟ್ಟ ಯುವಕನೊಬ್ಬನ ಕೊಲೆಗೆ ಪ್ರತೀಕಾರವಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದ್ದು, ಅಮಾಯಕನ ಕೊಲೆಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ರಾತ್ರೋರಾತ್ರಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES