Thursday, January 23, 2025

ಪ್ರವೀಣ್ ಹತ್ಯೆ ಪ್ರಕರಣ: ತನಿಖೆಯನ್ನು NIAಗೆ ಒಪ್ಪಿಸಬೇಕು :ಶೋಭಾ ಕರಂದ್ಲಾಜೆ ಆಗ್ರಹ

ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಇನ್ನು ಪತ್ರದಲ್ಲಿ ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಪ್ರಕಾರ, ಕೇರಳ ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಬಂದ ಹಂತಕರು ಪ್ರವೀಣ್ ಅವರನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಸಮಾಜದ ಶಾಂತಿ ಕದಡಲು ಇಸ್ಲಾಮಿಕ್ ಮೂಲಭೂತವಾದಿ ಸಂಘಟನೆಗಳಾದ ಪಿಎಫ್‌ಐ ಹಾಗೂ ಎಸ್‌ಡಿಪಿಐ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೇರಳದ ಮೂಲಭೂತವಾದಿ ಸಂಘಟನೆಗಳು ಕೊಲೆಗೆ ಸಂಚು ರೂಪಿಸಿ ಧನ ಸಹಾಯ ಮಾಡಿರುವ ಶಂಕೆಯೂ ಇದೆ’ ಎಂದು ಶೋಭಾ ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಹಿಂದೂಗಳ ಹಾಗೂ ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆಗಳು ನಡೆದಿವೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೇಂದ್ರ ಗೃಹ ಇಲಾಖೆ ಮಧ್ಯೆ ಪ್ರವೇಶಿಸಿ ಪಿಎಫ್‌ಐ, ಎಸ್‌ಡಿಪಿಐ ಹಾಗೂ ಇತರ ಮೂಲಭೂತವಾದಿ ಸಂಘಟನೆಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಬೇಕು.

ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿರುವ ಅನುಮಾನವಿದ್ದು, ಎನ್‌ಐಎ ತನಿಖೆಯಾಗಬೇಕು ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

RELATED ARTICLES

Related Articles

TRENDING ARTICLES