Monday, January 6, 2025

ಪ್ರವೀಣ್ ಹತ್ಯೆ: ಟ್ವೀಟ್​ ಮಾಡಿ ಸಂತಾಪ ಸೂಚಿಸಿದ ಬಿಎಸ್​ವೈ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲು ಸರ್ಕಾರ ಬದ್ದವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಈ ವಿಚಾರವಾಗಿ ಬುಧವಾರ ಟ್ವೀಟ್‌ ಮಾಡಿರುವ ಅವರು, ‘ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಅತ್ಯಂತ ಆಘಾತ ಮತ್ತು ದುಃಖವನ್ನು ಉಂಟುಮಾಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಅವರ ಕುಟುಂಬದ ಜೊತೆಯಲ್ಲಿದ್ದಾರೆ’ ಎಂದು ಹೇಳಿದ್ದಾರೆ.

‘ಪ್ರವೀಣ್ ಹತ್ಯೆಯ ಹಿಂದೆ ಇರುವ ವಿಚ್ಛಿದ್ರಕಾರಿ ಶಕ್ತಿಗಳನ್ನು ಕೂಡಲೇ ಪತ್ತೆ ಹಚ್ಚಿ, ತಪ್ಪಿತಸ್ಥರಿಗೆ ಕಾನೂನು ರೀತಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಸರ್ಕಾರ ಬದ್ದವಾಗಿದೆ. ಶಾಂತಿ ಕಾಪಾಡುವ ಜೊತೆಗೆ, ಸಮಾಜವಿರೋಧಿ ಶಕ್ತಿಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಸಹಕರಿಸೋಣ’ ಎಂದು ಬಿಎಸ್‌ವೈ ಟ್ವೀಟಿಸಿದ್ದಾರೆ.

RELATED ARTICLES

Related Articles

TRENDING ARTICLES