Wednesday, January 22, 2025

ವಾಯುಭಾರ ಕುಸಿತ, ಇನ್ನೂ ನಾಲ್ಕು ದಿನ ಮಳೆ

ಬೆಂಗಳೂರು : ಸಿಲಿಕಾನ್​ ಸಿಟಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವಾರಣ ಇರಲಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚೇತರಿಕೆ ಕಂಡಿದ್ದು, ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾದ ವರದಿಯಾಗಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮೋಡಕವಿದ ವಾತಾವರಣ ಕಂಡು ಬರುತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಲಕ್ಷಣಗಳು ಗೋಚರಿಸುತ್ತಿವೆ.

ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಂಭವವಿದೆ. ಸಂಜೆ ಹೊತ್ತಿದೆ ತಂಪಾದ ವಾತಾವಾರಣ ಇರಲಿದ್ದು, ಗಾಳಿ ಸಹಿತ ಜಿಟಿ, ಜಿಟಿ ಮಳೆಯಾಗಲಿದೆ. ಮೈಸೂರು, ಹಾಸನ, ಚಾಮರಾಜನಗರ, ಕೋಲಾರ, ಕಾರವಾರ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES