Sunday, May 12, 2024

ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಲಾಠಿಚಾರ್ಜ್; ಪೊಲೀಸ್​ ಅಧಿಕಾರಿಗಳ ವರ್ಗಾವಣೆ

ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಪ್ರವೀಣ್‍ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರಿಗೆ ಲಾಠಿ ಚಾರ್ಚ್ ಮಾಡಿದ ಪರಿಣಾಮ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣಾ ಪೊಲೀಸರನ್ನ ವರ್ಗಾವಣೆಗೊಳಿಸಲಾಗಿದೆ.

ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕರ್ತರೊಬ್ಬರ ಮೇಲೆ ಪೊಲೀಸರು ಲಾಠಿ ಬೀಸಿ ಹೆಲ್ಮೆಟ್‌ನಿಂದ ಹೊಡೆದಿದ್ದರು. ಆ ಬಳಿಕ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಯ ಎಸ್‍ಐ ಮತ್ತು ಇತರ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ಕೂಗು ಕೇಳಿ ಬಂದಿತ್ತು.

ಬಳಿಕ ಇದೀಗ ಇಬ್ಬರು ಎಸ್‍ಐ ಮತ್ತು ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಇತರ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ವಿಟ್ಲ ಠಾಣೆಯ ಪಿಎಸ್‍ಐ ಮಂಜುನಾಥ್ ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‍ಐ ಸುಹಾನ್ ಆರ್. ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಳಿಸಿ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.

RELATED ARTICLES

Related Articles

TRENDING ARTICLES