Thursday, December 26, 2024

ಸರ್ಕಾರದ ಮೇಲೆ ಜನರಿಗೆ ನಂಬಿಕೆ ಹೋಗಿದೆ : ಯು ಟಿ ಖಾದರ್

ಮಂಗಳೂರು : ಕಳೆದ 10 ದಿನಗಳಲ್ಲಿ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮೂರನೇ ಕಗ್ಗೊಲೆ ನಡೆದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಬೆಳ್ಳಾರೆಗೆ ಬಂದು ಹೋಗುವುದರೊಳಗೆ ಸುರತ್ಕಲ್ ನಲ್ಲಿ ಮತ್ತೊಂದು ರಕ್ತದೋಕುಳಿ ಹರಿದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರಾವಳಿಯ ಕಾಂಗ್ರೆಸ್ ನಾಯಕ ಶಾಸಕ ಯು ಟಿ ಖಾದರ್, ಕಳೆದ 10 ದಿನಗಳಲ್ಲಿ ಆದ ಮೂರೂ ಕೊಲೆಯನ್ನು ನಾವು ಖಂಡಿಸುತ್ತೇವೆ.

ಇನ್ನು, ಇದಕ್ಕೆ ನೈಜ ಕಾರಣವನ್ನು ಮತ್ತು ಕಾರಣರಾದವರನ್ನು ಸರ್ಕಾರ ಪತ್ತೆಹಚ್ಚಿ ಜನರ ಮುಂದೆ ನಿಲ್ಲಿಸಿ ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬಹುದು ಎಂದು ಹೇಳಿದ್ದಾರೆ.
ಮಂಗಳೂರಿನಲ್ಲಿ ಶಾಂತಿ ನಲೆಸುವ ಕೆಲಸ ಮಾಡಬೇಕಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಬಂದಾಗಲೇ ಕೊಲೆಯಾಗಿದೆ. ಸರ್ಕಾರದ ಮೇಲೆ ನಮಗೆ ನ್ಯಾಯ ಸಿಗುವ ನಂಬಿಕೆ ಇಲ್ಲದಾಗಿದೆ, ಇಲ್ಲಿ ಏನಾಗುತ್ತಿದೆ, ಶಾಂತಿ ಕದಡುವ ಕೆಲಸ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES