Thursday, January 23, 2025

ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಕ್ಷಮೆ ಕೇಳಿದ ಅಧೀರ್ ರಂಜನ್ ಚೌಧರಿ

ನವದೆಹಲಿ : ರಾಷ್ಟ್ರಪತಿಯವರನ್ನು ‘ರಾಷ್ಟ್ರಪತ್ನಿ’ ಎನ್ನುವ ಮೂಲಕ ವಿವಾದಕ್ಕೆ ಗುರಿಯಾಗಿದ್ದ ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ಕ್ಷಮೆ ಕೋರಿದ್ದಾರೆ.

‘ನೀವು ಹೊಂದಿರುವ ಸ್ಥಾನವನ್ನು ವಿವರಿಸುವಾಗ ತಪ್ಪು ಪದವನ್ನು ಬಳಸಿದ್ದಕ್ಕಾಗಿ ವಿಷಾದವನ್ನು ವ್ಯಕ್ತಪಡಿಸಲು ನಾನು ಈ ಪತ್ರ ಬರೆಯುತ್ತಿದ್ದೇನೆ. ನಾಲಗೆ ತಪ್ಪಾಗಿ ಹೊರಳಿ ಈ ಪ್ರಮಾದವಾಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಮತ್ತು ಇದನ್ನು ಸ್ವೀಕರಿಸಬೇಕೆಂದು ವಿನಂತಿಸುತ್ತೇನೆ’ ಎಂದು ಚೌಧರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

RELATED ARTICLES

Related Articles

TRENDING ARTICLES