Wednesday, January 22, 2025

ಸುಲಭವಾಗಿ ನ್ಯಾಯ ಒದಗಿಸುವುದು ಮುಖ್ಯ: ಪ್ರಧಾನಿ ಮೋದಿ

ನವದೆಹಲಿ: ದೆಹಲಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ ಅವರು ಜಿಲ್ಲಾ ನ್ಯಾಯಾಂಗ ವ್ಯವಸ್ಥೆಯನ್ನು ಮತ್ತಷ್ಟು ಬಲ ಪಡಿಸಲು ಒತ್ತು ನೀಡಲಾಗುವುದು. ಆರಾಮಾಗಿ ಬದುಕುವುದು ಎಷ್ಟು ಮುಖ್ಯವೋ ಅಷ್ಟೇ ಸುಲಭವಾಗಿ ನ್ಯಾಯ ಒದಗಿಸುವುದು ಕೂಡ ಅಷ್ಟೇ ಮುಖ್ಯ ಎಂದು ಪ್ರಧಾನಿ ಹೇಳಿದರು.

ಮೊದಲ ಅಖಿಲ ಭಾರತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, NDA ಸರ್ಕಾರ ಅಧಿಕಾರಕ್ಕೆ ಬಂದ ಕಳೆದ 8 ವರ್ಷಗಳಲ್ಲಿ ದೇಶದ ನ್ಯಾಯಾಂಗ ಮೂಲಸೌಕರ್ಯವನ್ನು ಬಲಪಡಿಸುವ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಲಾಗಿದೆ ಎಂದ್ರು.

ಇ-ಕೋರ್ಟ್​​​ ಮಿಷನ್​ ಅಡಿಯಲ್ಲಿ ದೇಶದಲ್ಲಿ ವರ್ಚುವಲ್​​ ನ್ಯಾಯಾಲಯಗಳು ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ಜನರ ಅನುಕೂಲಕ್ಕಾಗಿ ನ್ಯಾಯಾಲಯಗಳಲ್ಲಿ ವಿಡಿಯೋ ಕಾನ್ಫರೆನ್ಸಿಂಗ್​​ ಮೂಲಸೌಕರ್ಯಗಳನ್ನು ಸಹ ವಿಸ್ತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ವೇಳೆ ಸುಪ್ರೀಂ ಕೋರ್ಟ್​​ನ ಮುಖ್ಯ ನ್ಯಾಯಾಮೂರ್ತಿ ಎನ್​​​.ವಿ.ರಮಣ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES