Wednesday, December 25, 2024

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಮುಲ್ಕಿ- ಮೂಡುಬಿದಿರೆ ತಾಲೂಕಿನ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಇನ್ನು ಕಳೆದ ರಾತ್ರಿ ಭಾರಿ ಮಳೆಯಾಗುತ್ತಿದ್ದು, ಗುಡುಗು ಸಹಿತ ಭಾರೀ ಮಳೆ ಬೀಳುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಅವರು, ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಪರಿಸ್ಥಿತಿ ನೋಡಿ ರಜೆ ನಿರ್ಧರಿಸುವಂತೆ ಸೂಚನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES