Monday, December 23, 2024

ಗೃಹಸಚಿವರ ಸರ್ಕಾರಿ ನಿವಾಸಕ್ಕೆ ABVP ಮುತ್ತಿಗೆ

ಬೆಂಗಳೂರು : ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಕಠಿಣ ಕ್ರಮಕ್ಕೆ ಹಾಗೂ ಪಿಎಫ್​ಐ, ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ಜಯಮಹಲ್​ನಲ್ಲಿರುವ ಗೃಹ ಸಚಿವರ ಸರ್ಕಾರಿ ನಿವಾಸದ ಎದುರು ಭಾರೀ ಪ್ರತಿಭಟನೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರ ಪ್ರತಿಭಟನೆಯ ಕಿಚ್ಚಿಗೆ ಹೈರಾಣಾಗಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದು, ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಬಜರಂಗದಳ ಹರ್ಷ ಕೊಲೆ ಹಾಗೂ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವುದು ಬಿಜೆಪಿ ಆಡಳಿತಾವಧಿಯಲ್ಲೇ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂಬ ಆಕ್ರೋಶ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿದೆ.

RELATED ARTICLES

Related Articles

TRENDING ARTICLES