Wednesday, January 22, 2025

ಸಿಎಆರ್ ಗಾರ್ಡ್ ಇರುವಾಗ ಮನೆಗೆ ನುಗ್ಗುವುದು ಒಪ್ಪುವಂತದ್ದಲ್ಲ : ಪ್ರತಾಪ್ ರೆಡ್ಡಿ

ಬೆಂಗಳೂರು : ನಮ್ಮ ಡಿಸಿಪಿ, ಹೆಚ್ಚುವರಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಒಪ್ಪಿಕೊಳ್ಳುವಂತ ವಿಚಾರ ಅಲ್ಲ. ಈ ಬಗ್ಗೆ ಮೊದಲೇ ಮುನ್ಸೂಚನೆ ಅರಿತು ಕೊಳ್ಳಬೇಕಿತ್ತು, ಅದು ನಮ್ಮಿಂದ ಆಗಿಲ್ಲ. ನಮ್ಮ ಡಿಸಿಪಿ, ಹೆಚ್ಚುವರಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮಗೆ ಹತ್ತು ಗಂಟೆಗೆ ವಿಚಾರ ಗೊತ್ತಾಯ್ತು ಎಂದರು.

ಇನ್ನು, ಗೃಹ ಸಚಿವರಿಗೆ ಮನವಿ ಪತ್ರ ಕೊಟ್ಟು, ಮೌನ ಪ್ರತಿಭಟನೆ ಮಾಡ್ತಿವಿ ಅಂತ ಮಾಹಿತಿ ಇತ್ತು. ಸ್ಥಳದಲ್ಲಿ ರೆಸಿಡೆನ್ಸಿಷಿಯಲ್ ಗಾರ್ಡ್ ಇದ್ರು. ಮೊದಲು ಮೌನವಾಗಿ ಪ್ರತಿಭಟನೆ ಮಾಡ್ತಿದ್ರು ಅಂತ ಗೊತ್ತಾಗಿದೆ. ನಂತರ ಅಲ್ಲಿದ್ದ ಸಿಬ್ಬಂದಿ ಗೇಟ್ ಮುಚ್ಚಿದ್ದಾರೆ. ನಂತರ ಗೇಟ್ ತಳ್ಳಿಕೊಂಡು ಒಳ ನುಗ್ಗಲು ಪ್ರಯತ್ನಿಸಿದ್ದಾರೆ. ನಮ್ಮ ಪೊಲೀಸರು ಅವರನ್ನು ಹಿಡಿದುಕೊಂಡು, ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು.

ನಮ್ಮವರು ಮುನ್ಸೂಚನೆ ಕಲೆಕ್ಟ್ ಮಾಡಬೇಕಿತ್ತು, ಅದು ಆಗಲಿಲ್ಲ. ಈಗಾಗಲೇ ಹೆಚ್ಚುವರಿ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ, ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ತಪ್ಪು ಕಂಡು ಬಂದರೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಗೃಹ ಸಚಿವರಿಗೂ ಮಾಹಿತಿ ನೀಡಲಾಗಿದೆ, ನಾವು ಮಾತಾಡಿದ್ದೇವೆ. ಸಿಎಆರ್ ಗಾರ್ಡ್ ಇರುವಾಗ ಮನೆಗೆ ನುಗ್ಗುವುದು ಒಪ್ಪುವಂತದ್ದಲ್ಲ ಎಂದು ಕಮೀಷನರ್ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES