Monday, December 23, 2024

ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ

ಕಳೆದೊಂದು ವಾರದಿಂದ ಕೊಂಚ ಶಾಂತವಾಗಿದ್ದ ಮಲೆನಾಡು ಮತ್ತು ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. 2 ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಆರೆಂಜ್ ಅಲರ್ಟ್​ ಮುಂದುವರೆದಿದೆ.

ಇಂದು ಕೂಡ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಿದ್ದು, ಉತ್ತರ ಕರ್ನಾಟಕದಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಕಲಬುರಗಿ ಸೇರಿ ವಿವಿಧೆಡೆ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ.

RELATED ARTICLES

Related Articles

TRENDING ARTICLES