Monday, December 23, 2024

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ರೆ ರಾಜ್ಯ ಅಭಿವೃದ್ಧಿ ಆಗುತ್ತೆ : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ಕಾನೂನು ಸುವ್ಯವಸ್ಥೆ ಚೆನ್ನಾಗಿದ್ರೆ ರಾಜ್ಯ ಅಭಿವೃದ್ಧಿ ಆಗುತ್ತೆ ಎಂದು ಬೆಂಗಳೂರಿನಲ್ಲಿ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ನಡೆಗೆ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾಡಿದ್ದು, ಕಾನೂನು ಸುವ್ಯವಸ್ಥೆ ಚೆನ್ನಾಗಿದ್ರೆ ರಾಜ್ಯ ಅಭಿವೃದ್ಧಿ ಆಗುತ್ತೆ, ವಿದ್ಯಾರ್ಥಿಗಳು ನಿರಾಳ ಮನಸ್ಸಿನಿಂದ ಇರ್ತಾರೆ. ನಮ್ಮ ಭಾಗದ ಅಭಿವೃದ್ಧಿ ಆಗಬೇಕು ಅಂದರೆ ಕಾನೂನು ಸುವ್ಯವಸ್ಥೆ ಸರಿ ಇರಬೇಕು ಎಂದರು.

ಇನ್ನು, ನಾವಿಲ್ಲಿ ಕಾನೂನಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಹೋದರೆ ಕರ್ನಾಟಕ್ಕೆ ಮಾರಕ, ಈಗಾಗಲೇ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಹಿಂದೂ ಮುಸ್ಲಿಂ ಯಾರೇ ಇರಲಿ ಸರ್ಕಾರ ನಿಷ್ಪಕ್ಷಪಾತವಾಗಿ ನೋಡಬೇಕು ಎಂದು ಹೇಳಿದರು.

RELATED ARTICLES

Related Articles

TRENDING ARTICLES