Thursday, January 23, 2025

ವೇಟ್‌ಲಿಫ್ಟಿಂಗ್​ನಲ್ಲಿ ಭಾರತಕ್ಕೆ 2ನೇ ಪದಕ

ಕಾಮನ್‌ವೆಲ್ತ್‌ ಗೇಮ್ಸ್‌ ಕ್ರೀಡಾಕೂಟದ ಭಾರತಕ್ಕೆ ಎರಡನೇ ಪದಕ ಗೆದ್ದುಕೊಡುವಲ್ಲಿ ಕನ್ನಡಿಗ ಗುರುರಾಜ ಪೂಜಾರಿ ಯಶಸ್ವಿಯಾಗಿದ್ದಾರೆ.

ಪುರುಷರ 61 ಕೆ.ಜಿ. ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 269 ಕೆ.ಜಿ. ವೇಟ್‌ಲಿಫ್ಟ್‌ ಮಾಡುವ ಮೂಲಕ ಮತ್ತೊಮ್ಮೆ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೊದಲು 2018ರಲ್ಲಿ ನಡೆದ ಗೋಲ್ಡ್‌ಕೋಸ್ಟ್‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಗುರುರಾಜ ಪೂಜಾರಿ ಬೆಳ್ಳಿ ಪದಕ ಜಯಿಸಿದ್ದರು.

ಕರ್ನಾಟಕದ ಉಡುಪಿ ಜಿಲ್ಲೆಯ ಗುರುರಾಜ ಪೂಜಾರಿ ಈ ಹಿಂದೆ 2018ರ ಗೋಲ್ಡ್ ಕೋಸ್ಟ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದರು. ನಂತರ 56 ಕೆಜಿ ವಿಭಾಗದಲ್ಲಿ ಭಾಗವಹಿಸಿ ಬೆಳ್ಳಿ ಪದಕ ಗೆದ್ದರು. ಈ ಬಾರಿ ವಿಭಾಗ ಬದಲಿಸಿದ ಗುರುರಾಜ 61 ಕೆಜಿ ವಿಭಾಗದಲ್ಲಿ ಅಖಾಡಕ್ಕಿಳಿದು ಕಂಚು ಗೆದ್ದಿದ್ದಾರೆ. ಇನ್ನು, ಗುರುರಾಜ್ ಪೂಜಾರಿಗೆ ರಾಜಕೀಯ ನಾಯಕರು ಶುಭಾಷಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES