Friday, May 10, 2024

ಇಂದು ನಾಡಿನೆಲ್ಲೆಡೆ ನಾಗರಪಂಚಮಿ ಹಬ್ಬದ ಸಂಭ್ರಮ

ನಾಗರ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು, ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ.

ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚರ್ತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತದೆ.

ಈ ನಾಗರಪಂಚಮಿ ಹೆಚ್ಚಾಗಿ ಹೆಣ್ಣು ಮಕ್ಕಳ ಹಬ್ಬ. ನಾಗರಪಂಚಮಿಯ ಹಿಂದಿನ ದಿನ ಸಹೋದರಿ ನಾಗದೇವತೆಗೆ ಬೇಡಿಕೊಂಡರೆ ಸಹೋದರನಿಗೆ ಲಾಭ ಹಾಗೂ ರಕ್ಷಣೆ ಸಿಗುತ್ತದೆ. ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದು ಕೂಡಿರುತ್ತದೆ. ನಾಗರಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಕರಿ ಸೀರೆ ಉಡಿಸಾಕ ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆಯನ್ನು ಸಾರುತ್ತದೆ. ಹಾಗೆನೇ ತವರಿಗೆ ಹೆಣ್ಣು ಮಕ್ಕಳನ್ನು ಆಹ್ವಾನಿಸಿ ಉಡುಗೊರೆ ನೀಡಿ ಗೌರವಿಸಲಾಗುತ್ತದೆ.

 

RELATED ARTICLES

Related Articles

TRENDING ARTICLES