Monday, January 27, 2025

ಇಂದು ಬೆಂಗಳೂರಿಗೆ ಅಮಿತ ಶಾ ಆಗಮನ

ಬೆಂಗಳೂರು : ಸಿಲಿಕಾನ್​ ಸಿಟಿಗೆ ಆಗಮಿಸುತ್ತಿರುವ ಅಮಿತ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಿದ್ದಾರೆ.

ನಗರದಲ್ಲಿ ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಲಿರುವ ಚುನಾವಣಾ ಚಾಣಕ್ಯ, ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಿದ್ದಾರೆ. ಇಂದು ರಾತ್ರಿ ಬೆಂಗಳೂರಿನ ವಾಸ್ತವ್ಯ ಹೂಡಲಿರುವ ಅಮಿತ ಶಾ ಅವರು, ಅಗಸ್ಟ್ 4 ರಂದು ಆಯೋಜಿಸಲಾಗಿರುವ ಸಂಕಲ್ಪ ಸಿದ್ಧಿ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ‌.

ಅದಲ್ಲದೇ, ಅಮಿತ ಶಾ ಅವರ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ನಂತರ ಅಗಸ್ಟ್ 4 ರಂದು ಮಧ್ಯಾಹ್ನ ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದಾರೆ.

RELATED ARTICLES

Related Articles

TRENDING ARTICLES