Friday, April 26, 2024

ಪ್ಯಾರಾ ಪವರ್ ಲಿಫ್ಟಿಂಗ್​​​​ನಲ್ಲಿ ಭಾರತಕ್ಕೆ ಚಿನ್ನ

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಕಾಮನ್​ವೆಲ್ತ್ ಗೇಮ್ಸ್ 2022 ರಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಕಾಮನ್​ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ಯಾರಾ ಪವರ್ ಲಿಫ್ಟಿಂಗ್​​ನಲ್ಲಿ ಭಾರತದ ಸುಧೀರ್ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ನಿನ್ನೆ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್​​ವೆಲ್ತ್ ಗೇಮ್ಸ್​ನಲ್ಲಿ ಇತಿಹಾಸ ನಿರ್ಮಿಸಿದರು. ಈ ಮೂಲಕ ಭಾರತದ ಪದಕಗಳ ಸಂಖ್ಯೆ 20 ಕ್ಕೇರಿದೆ. ಸದ್ಯ ಭಾರತದ ಬಳಿ ಆರು ಚಿನ್ನ, ಏಳು ಬೆಳ್ಳಿ ಮತ್ತು 7 ಕಂಚಿನ ಪದಕವಿದೆ. 87 ಕೆ.ಜಿ. ಇರುವ ಸುಧೀರ್ ತಮ್ಮ ಮೊದಲ ಪ್ರಯತ್ನದಲ್ಲಿ 208 ಕೆ.ಜಿ ಭಾರ ಎತ್ತಿದರು. ಹೀಗೆ 132 ಕ್ಕೂ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನವನ್ನು ಗಳಿಸಿದ್ದಾರೆ.

ಪ್ಯಾರಾ ಪವರ್ ಲಿಫ್ಟಿಂಗ್​ನಲ್ಲಿ ವಿಜೇತರನ್ನು ಪಾಯಿಂಟ್​ಗಳ ಆಧಾರದ ಮೇಲೆ ನಿರ್ಧರಿಸುವುದು ವಾಡಿಕೆ. ಇದರಲ್ಲಿ ಸ್ಪರ್ಧಿಯ ದೇಹದ ತೂಕ & ಎತ್ತುವ ತೂಕದ ಆಧಾರದ ಮೇಲೆ ಪಾಯಿಂಟ್ ಗಳನ್ನು ನಿರ್ಧರಿಸಲಾಗುತ್ತದೆ. ಸುಧೀರ್ ತಮ್ಮ ಎರಡನೇ ಪ್ರಯತ್ನದಲ್ಲಿ 212 ಕೆಜಿ ಎತ್ತಿ ದಾಖಲೆಯ 134.5 ಅಂಕಗಳನ್ನು ಗಳಿಸಿದರು. ಈ ಮೂಲಕ ಕಾಮನ್ ವೆಲ್ತ್ ಗೇಮ್ಸ್ 2022ರಲ್ಲಿ ಚಿನ್ನದ ಪದಕವನ್ನು ಬಾಜಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES