Monday, December 23, 2024

ಕರ್ನಾಟಕದಲ್ಲಿ ಇನ್ನು 5 ದಿನ ಭಾರಿ ಮಳೆ

ಬೆಂಗಳೂರು : ಕರ್ನಾಟಕದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರಿಯಲಿದ್ದು, ಆಗಸ್ಟ್ 6 ರಂದು ಶನಿವಾರ ಭಾರಿ ಮಳೆ ಆಗುವ ಕಾರಣಕ್ಕೆ ಐದು ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್’ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ ಕರ್ನಾಟಕ ಕರಾವಳಿಯ ಮತ್ತು ಮಲೆನಾಡಿನ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಅಂದು ಈ ಜಿಲ್ಲೆಗಳ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ನಿರಂತರವಾಗಿ ಮಳೆ ಸುರಿಯಲಿದೆ. ಈ ಜಿಲ್ಲೆಗಳಲ್ಲಿ ಒಂದು ದಿನ ಸುಮಾರು 20ಸೆಂ.ಮೀ.ಗಿಂತಲೂ ಹೆಚ್ಚು ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ರಾಜ್ಯದಲ್ಲಿ ಆಗಸ್ಟ್ 07ರವರೆಗೆ ಭಾರೀ ಮಳೆಯಾಗಲಿದೆ. ಈ ಮೂರು ದಿನ ಕರಾವಳಿ ಜಿಲ್ಲೆಗಳೂ ಒಳಗೊಂಡಂತೆ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಒಂದು ದಿನ ಹಾಗೂ ಚಿಕ್ಕಮಗಳೂರು, ಕೊಡಗು, ಮಡಿಕೇರಿ, ಶಿವಮೊಗ್ಗ ಜಿಲ್ಲೆಗಳಿಗೆ ಎರಡು ದಿನ ‘ಆರೆಂಜ್‌ ಅಲರ್ಟ್’ ಕೊಡಲಾಗಿದೆ.

RELATED ARTICLES

Related Articles

TRENDING ARTICLES