Monday, December 23, 2024

ರೆಪೋ ದರ ಮತ್ತೆ ಹೆಚ್ಚಿಸಿದ RBI

ಇಂದು ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಮತ್ತೆ 0.50 ಮೂಲಾಂಕದಷ್ಟು ಹೆಚ್ಚಿಸಿದೆ. 6 ಜನರ ನೇತೃತ್ವದ ಹಣಕಾಸು ನೀತಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಸದ್ಯದ ರೆಪೋ ದರವು ಶೇಕಡಾ 5.40 ಕ್ಕೆ ಏರಿಕೆಯಾಗಿದೆ.

2019ರಲ್ಲಿ ಅಂದರೆ ಕೊರೊನಾ ಸಾಂಕ್ರಾಮಿಕಕ್ಕೂ ಮುನ್ನ ಇದ್ದ ರೆಪೋ ದರದ ಮಟ್ಟಕ್ಕೆ ಹೆಚ್ಚಳವಾಗಿದೆ. “Q2 ಮತ್ತು Q3 ಅವಧಿಯಲ್ಲಿ ಹಣದುಬ್ಬರವು ಮೇಲಿನ ಮಿತಿಗಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿರಂತರವಾದ ಹೆಚ್ಚಿನ ಹಣದುಬ್ಬರವು ಹಣದುಬ್ಬರದ ನಿರೀಕ್ಷೆಗಳನ್ನು ಅಸ್ಥಿರಗೊಳಿಸಬಹುದು ಮತ್ತು ಮಧ್ಯಮ ಅವಧಿಯ ಬೆಳವಣಿಗೆಯನ್ನು ಹಾನಿಗೊಳಿಸುತ್ತದೆ ಎಂದು ಎಂಪಿಸಿ ಒತ್ತಿ ಹೇಳಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

RELATED ARTICLES

Related Articles

TRENDING ARTICLES