Monday, December 23, 2024

ಕಾಂಗ್ರೆಸ್ ಮುಖಂಡರು ಭ್ರಮಾಲೋಕದಲ್ಲಿದ್ದಾರೆ : ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು : ನಾವು ಅಧಿಕಾರಕ್ಕೆ ಬರ್ತಿವಿ ಅಂತ ಕಾಂಗ್ರೆಸ್ ಮುಖಂಡರು ಭ್ರಮೆಯಲ್ಲಿದ್ದಾರೆ ಎಂದು ವಿಧಾನಸೌಧದಲ್ಲಿ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.

ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಭ್ರಮೆಯಲ್ಲಿದ್ದಾರೆ. ಸಿದ್ದರಾಮಯ್ಯ ನವ್ರ ಮೇಲೆ ನನಗೆ ನಿಜವಾಗಿಯೂ ಗೌರವ ಇದೆ. ನಾನು ಟೀಕೆ ಮಾಡಲ್ಲ. ಸಿದ್ದರಾಮಯ್ಯ ಅವರ ಬಗ್ಗೆ ಇಟ್ಟಿರುವ ಗೌರವಕ್ಕೆ ಅಭಿಮಾನಿಗಳು ಬಂದಿದ್ದಾರೆ. ಅವು ಕಾಂಗ್ರೆಸ್ ಮತಗಳು ಅಲ್ಲ, ಎಲ್ಲೋ ಒಂದು ಕಡೆ ಕಾಂಗ್ರೆಸ್ ಸತ್ತು ಹೋಗಿದೆ. ಬಿಜೆಪಿ ಸಂಘಟನೆ ದೇಶದಲ್ಲಿ, ರಾಜ್ಯದಲ್ಲಿ ಬಲಿಷ್ಠವಾಗಿದೆ. ನೇಕಾರ ಸಮುದಾಯದ ಮಕ್ಕಳಿಗೆ ವಿದ್ಯಾನಿಧಿ ಕಾರ್ಯಕ್ರಮವನ್ನ ಸಿಎಂ ಕೊಟ್ಟಿದ್ದಾರೆ ಎಂದರು.

ಇನ್ನು, ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಯುವಕರಿಗೆ ಆದ್ಯತೆ ಕೊಟ್ಟಿದ್ದಾರೆ. ನಮ್ಮ ಸರ್ಕಾರದ ಅನೇಕ ಜನಪರ ಕಾರ್ಯಕ್ರಮಗಳನ್ನ ನೀಡಿದೆ. ಒಟ್ಟಾಗಿ ನಾವು ಮುನ್ನುಗ್ಗಿ ಮತ್ತೆ ಅಧಿಕಾರಕ್ಕೆ ಬರ್ತಿವಿ. ಜನರ ಮನೆ ಬಾಗಿಲಿ ತಲುಪಿಸಿ ಮತ್ತೆ ನಾವು ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ನಾವು ಸಹ ದಾವಣಗೆರೆಯಲ್ಲಿ ಸಮಾವೇಶ ಮಾಡುತ್ತೇವೆ. ಆದ್ರೆ ಇದು ಸಿದ್ದರಾಮೋತ್ಸವಕ್ಕೆ ಕೌಂಟರ್ ಅಲ್ಲ. ಜನಪರವಾದ ಯೋಜನೆಗಳನ್ನ ಜನರ ಮನೆ ಬಾಗಿಲಿಗೆ ತಲುಪಿಸುವ ಸಲುವಾಗಿ ಸಮಾರೋಪ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದ್ದಾರೆ.

ಅದಲ್ಲದೇ, ಈ ಬಗ್ಗೆ ಸಿಎಂ ಹಾಗೂ ಅಧ್ಯಕ್ಷರ ಜೊತೆಗೆ ಚರ್ಚೆ ನಡೆಸಿದ್ದೇವೆ. ಕಾರ್ಯಕ್ರಮದ ಸಮಾರೋಪಕ್ಕೆ ಅವಕಾಶ ಕೊಡಿ ಅಂತ ಕೇಳಿದ್ದೇವೆ. ಸಿದ್ದರಾಮೋತ್ಸವ ವಿರೋಧ ಮಾಡಿದ್ದು ಕಾಂಗ್ರೆಸ್ ನವ್ರು. ಕಾಂಗ್ರೆಸ್​​​ನಲ್ಲಿ ಗುಂಪಿಗಾರಿಕೆ ಇದೆ. ಬಿಜೆಪಿಯಲ್ಲಿ ಯಾವುದೇ ಗುಂಪಿಗಾರಿಕೆ ಇಲ್ಲ. ಸಿದ್ದರಾಮಯ್ಯನವರ ಮೇಲೆ ಗೌರವ ಇದೆ ಯಾವುದೇ ಭಯವಿಲ್ಲ ಎಂದರು.

RELATED ARTICLES

Related Articles

TRENDING ARTICLES