Wednesday, January 22, 2025

ನ್ಯಾಯಾಲಯಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಸುತ್ತೋಲೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇನ್ನು, ಇದರ ಭಾಗವಾಗಿ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಹಾಗೂ ನ್ಯಾಯಾಂಗ ಅಧಿಕಾರಿಗಳ ಮನೆಯಲ್ಲಿ ಆಗಸ್ಟ್ 13 ರಿಂದ 15 ರ ನಡುವೆ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ. ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ಶಿವಶಂಕರೇಗೌಡ ಧ್ವಜ ಹಾರಿಸುವ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.

RELATED ARTICLES

Related Articles

TRENDING ARTICLES