Saturday, January 11, 2025

ಕೊಡಗಿನಲ್ಲಿ ಮುಂದುವರೆದ ಮಳೆಯ ಅಬ್ಬರ

ಕೊಡಗು : ತಲಕಾವೇರಿ ಭಾಗಮಂಡಲದಲ್ಲಿ ಮಳೆ ಹೆಚ್ಚಾದ ಹಿನ್ನಲೆ ಇಂದು ಮುಂಜಾನೆ 8:30 ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.

ತಲಕಾವೇರಿ ಭಾಗಮಂಡಲದಲ್ಲಿ ಮಳೆ ಹೆಚ್ಚಾದ ಹಿನ್ನಲೆಯಲ್ಲಿ, ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಗೊಂಡಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ನಾಪೋಕ್ಲು ಭಾಗಮಂಡಲ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ ನಾಪೋಕ್ಲು ಭಾಗಮಂಡಲ ಸಂಪರ್ಕ ಸಂಪೂರ್ಣ ಬಂದಾಗಿದೆ.

ಇನ್ನು, ಮಡಿಕೇರಿ ಭಾಗಮಂಡಲ‌ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಮತ್ತಷ್ಟು ಮಳೆ ಹೆಚ್ಚಾದಲ್ಲಿ ಭಾಗಮಂಡಲ ಸಂಪೂರ್ಣ ಬಂದ್ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES