Monday, December 23, 2024

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರಿದಿದೆ. ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಮಳೆ ಹೆಚ್ಚಾಗಲಿದೆ. ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು, ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡಕವಿದ ವಾತಾವರಣ ಇರಲಿದ್ದು, ಒಂದೆರಡು ಬಾರಿ ಹಗುರ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೊಡಗಿನಲ್ಲಿ ಮಳೆಯಿಂದ ಆರೇಂಜ್ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES