ಮಂಡ್ಯ : ಕೃಷ್ಣ ರಾಜ ಸಾಗರ ಅಣೆಕಟ್ಟೆಯಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವ ಪ್ರಸಿದ್ದ ರಂಗನತಿಟ್ಟು ಪಕ್ಷಿಧಾಮ ಭಾಗಶಃ ಮುಳುಗಡೆಯಾಗಿದೆ.
ಕಾವೇರಿ ಜಲಾನಯನ ಮಳೆ ಅಬ್ಬರ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿರುವ ಕಾರಣ ಕಾವೇರಿ ನದಿಗೆ ನೀರು ಬಿಡಲಾಗಿದೆ. ಗೂಡು, ಮೊಟ್ಟೆ ರಕ್ಷಿಸಿಕೊಳ್ಳಲು ಪಕ್ಷಿ ಸಂಕುಲ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಎತ್ತರದ ಮರದಲ್ಲಿ ಕೆಲ ಪಕ್ಷಿಗಳು ಆಶ್ರಯ ಪಡೆದಿದ್ದಾವೆ. ಮುನ್ನೆಚ್ಚರಿಕೆ ಕ್ರಮವಾಗಿ ಪಕ್ಷಿಧಾಮದ ಬೋಟಿಂಗ್ ಸ್ಥಗಿತ ಮಾಡಲಾಗಿದ್ದು ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.