Friday, May 17, 2024

‘ಸಿದ್ದರಾಮೋತ್ಸವ ಸ್ಟಿರಾಯ್ಡ್ ಇದ್ದಂತೆ : ಎಂ.ಬಿ ಪಾಟೀಲ್

ವಿಜಯಪುರ : ಸಿದ್ದರಾಮೋತ್ಸವದಲ್ಲಿ ಸೇರಿದ್ದ ಜನಸ್ತೋಮ ಕಾಂಗ್ರೆಸ್ ಗೆ ಹೊಸ ಹುಮ್ಮಸ್ಸು ನೀಡಿದೆ ಎಂದು ಶಾಸಕ ಎಂ.ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ ಜನ ಸಾಗರ ಸೇರಿದ್ದ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ 75 ನೇ ಜನ ದಿನ ಇತ್ತು, ಹಾಗಾಗಿ ನಾವು ಆಚರಣೆ ಮಾಡಿದ್ದೆವು. ಅವರು ಏನಂತಾ ಮಾಡ್ತಾರೆ, ಏನಂತಾ ಪರ್ಯಾ ಸಮಾವೇಶ ಮಾಡುತ್ತಾರೆ. ಆಗಲೇ ನಾ ಹೇಳಿದ್ದೇನೆ, ರಾಜ್ಯದ ಇತಿಹಾಸದಲ್ಲಿ ಇಷ್ಟು ಜನಾ ಸೇರಿರಲಿಲ್ಲಾ, ಮುಂದೆಯೂ ಸೇರಲ್ಲಾ. ಬೇಕಾದರೆ ಸಮಾವೇಶ ಮಾಡಿ ನೋಡಲು ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಇನ್ನು, ಸಿದ್ದರಾಮೋತ್ಸವದಲ್ಲಿ ಸೇರಿದ್ದ ಜನಸ್ತೋಮ ಕಾಂಗ್ರೆಸ್​​ಗೆ ಹೊಸ ಹುಮ್ಮಸ್ಸು ನೀಡಿದೆ. ಸಿದ್ದರಾಮಯ್ಯ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರಿಂದ ಕಾಂಗ್ರೆಸ್ ಆತ್ಮಸ್ಥೈರ್ಯ ಹೆಚ್ಚಾಗಿದೆ. ಬಿಜೆಪಿ ಬಗ್ಗೆ ಜನರು ಜಿಗುಪ್ಸೆಯನ್ನು ಹೊಂದಿದ್ದಾರೆ ಎಂಬುದನ್ನಾ ಇದು ತೋರಿಸುತ್ತಿದೆ ಎಂದರು.

ಕಾಂಗ್ರೆಸ್​​ನಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಯಾರೂ ಮಾತನಾಡದಂತೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ಚುನಾವಣೆಯಲ್ಲಿ ಮೊದಲು ನಾವು ಹೆಚ್ಚಿನ ಸಂಖ್ಯೆಗಳನ್ನು ಪಡೆಯಬೇಕು. 115,125,130, 140 ನಮ್ಮ ಸೀಟ್​​​ಗಳು ಬರಬೇಕು. ಹೆಚ್ಚಿನ ಸ್ಥಾನಗಳು ಬಂದ ಬಳಿಕ ಶಾಸಕಾಂಗ ಸಭೆ ಕರೆಯಲಾಗುತ್ತದೆ. ಶಾಸಕರ ಅಭಿಪ್ರಾಯವನ್ನು ವೀಕ್ಷಕರು ಪಡೆದುಕೊಳ್ಳುತ್ತಾರೆ. ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಕಾಂಗ್ರೆಸ್ ಆಧ್ಯಕ್ಷರು ಯಾರು ಸಿಎಂ ಆಗಬೇಕೆಂದು ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದು ವಿಜಯಪುರ ನಗರದಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

RELATED ARTICLES

Related Articles

TRENDING ARTICLES