ಬೆಂಗಳೂರು : ಅಧಿವೇಶನ ಇದ್ದಾಗಲೇ ಕುಮಾರಸ್ವಾಮಿ ಸದನಕ್ಕೆ ಬರೋದಿಲ್ಲ, ಎಲ್ಲಿದ್ಯಪ್ಪ ಕುಮಾರಸ್ವಾಮಿ ಅಂತಾ ಅವರನ್ನು ಹುಡುಕಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ಲೇವಡಿ ಮಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನ ಕರೀರಿ ಅನ್ನೋದು ಆಮೇಲೆ ಬರದೆ ಇರೋದು. ಸಿದ್ದರಾಮಯ್ಯ ಮಾತಿನಂತೆ ಇವ್ರು ಮಾತಾಡ್ತಿರೋದು. ಬಾಯಿಗೆ ಬಂದಂತೆ ದಿಕ್ಕು ಇಲ್ಲದಂತೆ ಗುಂಡು ಹೊಡೆಯುತ್ತಿದ್ಸಾರೆ ಎಂದರು.
ಇನ್ನು, ರಾಮನಗರ ಜಿಲ್ಲೆಯಲ್ಲಿ ನಾವು ಚೆನ್ನಾಗಿ ಕೆಲಸ ಮಾಡ್ತಿದ್ದೇವೆ. ನಮ್ಮ ಪಕ್ಷ ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರ. ಇದು ಯಾವುದೋ, ಕಾಂಗ್ರೆಸ್, ಜೆಡಿಎಸ್ ನಂತೆ ಪ್ರವೈಟ್ ಕಂಪನಿ ತರ ಅಲ್ಲ. ನಮ್ಮಲ್ಲಿ ಯಾರು ಏನು ಬೇಕಾದರೂ ಆಗಬಹುದು. ಆದರೆ ಅಲ್ಲಿ ಕುಟುಂಬಕ್ಕಷ್ಟೇ ಅಧಿಕಾರ. ಸೋನಿಯಾ ಗಾಂಧಿ ಕಂಪನಿ, ರಾಹುಲ್ ಗಾಂಧಿ ಕಂಪನಿ, ಪ್ರಿಯಾಂಕಾ ಗಾಂಧಿ ಕಂಪನಿ, ರಾಮನಗರದಲ್ಲಿ ಒಂದು ಕುಮಾರಸ್ವಾಮಿ ಒಂದು ಕಂಪನಿ ಈ ಸಮಾಜದಲ್ಲಿ ಯಾವುದಾದರೂ ಅರ್ಥ ಇಲ್ಲದೆ ಇರೋ ಪಕ್ಷಗಳು ಅಂದರೆ ಇವುಗಳೇ, ಬರುವ ಚುನಾವಣೆಯಲ್ಲಿ ರಾಮನಗರದಲ್ಲಿ ನಾವು ಮೆಜಾರಿಟಿನೇ ತೆಗೆದುಕೊಳ್ತೇವೆ. ಅಲ್ಲಿ ಎಲ್ಲ ತರ ಇದ್ದಾರೆ, ಬಂಡೆ ಜೊತೆ ಕುಮಾರಸ್ವಾಮಿನೂ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.