Sunday, December 22, 2024

ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು: ಬೆಳ್ಳಾರೆಯಲ್ಲಿ ಎಡಿಜಿಪಿ ನೇತೃತ್ವದಲ್ಲಿ ಆರು ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆ ಹಿನ್ನೆಲೆಯಲ್ಲಿ ಇಂದು ಮಂಗಳೂರಿಗೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ ಈ ಕುರಿತು ಮಾತನಾಡಿದ್ದಾರೆ.

ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಭಾಗಿಯಾದ ಮುಖ್ಯ ಆರೋಪಿಗಳಿಗೆ ಪತ್ಯಕ್ಷ, ಪರೋಕ್ಷ ಸಹಕಾರ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ. ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ ಎಂದಿದ್ದಾರೆ.

ಆರೋಪಿಗಳಿಗೆ ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಸುತ್ತೇವೆ. ಎನ್ಐಎ ಅಧಿಕಾರಿಗಳ‌ ಜೊತೆ ಸೇರಿ ಈ ಕ್ರಮ ಜರುಗಿಸಲಾಗುವುದು ಎಂದು ಅಲೋಕ್​ಕುಮಾರ್​ ಹೇಳಿದರು.

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ. ಅವರ ಫೋಟೋ, ಮನೆ ವಿಳಾಸ, ತಂದೆ-ತಾಯಿ, ಹೆಂಡತಿ ಮಾಹಿತಿ ಎಲ್ಲವೂ ಲಭ್ಯವಿದೆ. ಆದರೆ, ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ. ಆಗಾಗ ಆರೋಪಿಗಳು ಸ್ಥಳ ಬದಲಾವಣೆ ಮಾಡುತ್ತಿದ್ದಾರೆ. ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿಗಳು ಪರಾರಿಯಾಗುತ್ತಿದ್ದಾರೆ.

ಆರೋಪಿಗಳಿಗೆ ಪಿಎಫ್ಐ ಲಿಂಕ್ ಇದೆಯೇ ಎಂಬ ವಿಚಾರ ಕುರಿತು ಮಾತನಾಡಿ, ನಾವು ಯಾವುದೇ ದಾಖಲೆ ಇಲ್ಲದೆ ಮಾತನಾಡೋದಿಲ್ಲ. ದಾಖಲೆ ಜೊತೆಗೆ ಮಾತನಾಡುತ್ತೇವೆ, ಸುಮ್ಮನೆ ಏನನ್ನೂ ಹೇಳೋದಿಲ್ಲ. ಕೆಲವು ಆರೋಪಿಗಳಿಗೆ ಪಿಎಫ್ ಐ ಲಿಂಕ್ ಇದೆ, ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಸದ್ಯ ಈ ಪ್ರವೀನ್ ಹತ್ಯೆಯಲ್ಲಿ ಭಾಗಿಯಾದ ಏಳು ಮಂದಿ ಸ್ಥಳೀಯರಾಗಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

RELATED ARTICLES

Related Articles

TRENDING ARTICLES