Wednesday, January 22, 2025

ಈ ದಿನದಂದು ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿದ BMTC

ಬೆಂಗಳೂರು: ಆಗಸ್ಟ್​ 15 ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರಿನ ಜನರಿಗೆ ಬಿಎಂಟಿಸಿ ಭರ್ಜರಿ ಸಿಹಿಸುದ್ದಿ ನೀಡಿದೆ.

ಸ್ವಾತಂತ್ರ್ಯ ದಿನಾಚರಣೆ ದಿನ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಬಿಎಂಟಿಸಿ ಘೋಷಣೆ ಮಾಡಿದ್ದು,  ರಾಜ್ಯ ಸರ್ಕಾರದ ಸೂಚನೆಯಂತೆ ಬಿಎಂಟಿಸಿ ಈ ಆದೇಶವನ್ನು ಆದೇಶಿಸಿದೆ.

ಬೆಂಗಳೂರಿನಲ್ಲಿ ಬಸ್​ನಲ್ಲಿ ಹೋಗುವ ಎಲ್ಲಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ನೀಡಿದ್ದು, ಆಗಸ್ಟ್​ 15 ರಂದು 24 ಗಂಟೆಗಳ ಕಾಲ (ದಿನ ಪೂರ್ತಿ) ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ನಲ್ಲೂ ಉಚಿತ ಪ್ರಯಾಣ
ಇದರಿಂದ ಬಿಎಂಟಿಸಿಗೆ 3 .5 ಹೊರೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.

RELATED ARTICLES

Related Articles

TRENDING ARTICLES