Wednesday, December 25, 2024

ರಾಜ್ಯದಲ್ಲಿ ಮುಂದುವರಿದ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲೂ ಉತ್ತಮ ಮಳೆ ಸುರಿಯಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆ ಬರುವ ಸೂಚನೆ ಇದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ.

RELATED ARTICLES

Related Articles

TRENDING ARTICLES