Sunday, December 22, 2024

ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ 144 ಸೆಕ್ಷನ್ ಜಾರಿ.!

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದು ಇಬ್ಬರ ಸಾವು, ಒಬ್ಬರಿಗೆ ಗಂಭೀರ ಗಾಯಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್​ ಗ್ರಾಮದಲ್ಲಿ 10 ದಿನಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಕೊಪ್ಪಳ ಎಸ್.ಪಿ.ಅರುಣಾಂಗ್ಷು ಗಿರಿ ಈ ಆದೇಶ ಹೊರಡಿಸಿದ್ದು, ಹುಲಿಹೈದರ್ ಗ್ರಾಮದಲ್ಲಿ ನಡೆದ ಎರಡು ಗುಂಪುಗಳ ಜಗಳದಲ್ಲಿ ಯಂಕಪ್ಪ ಹಾಗೂ ಬಾಷಾವಲಿ ಇಬ್ಬರು ಮೃತಪಟ್ಟಿದ್ದರು.

ಬಾಷಾವಲಿ ಅಂಗಡಿಗೆ ಹೋದಾಗ ಗಲಾಟೆಯಾಗಿದ್ದೇ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಕಾರಣವಾಗಿದೆ. ಗ್ರಾಮದಲ್ಲಿ 8 ಜನ ಪೊಲೀಸ್ ಅಧಿಕಾರಿಗಳು,70 ಜನಕ್ಕೂ ಹೆಚ್ಚು ಸಿಬ್ಬಂದಿ ಹಾಗೂ KSRP ತುಕಡಿ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ವರಿಷ್ಠಾದಿಕಾರಿ ಹೇಳಿದ್ದಾರೆ.

ಈ ಗಲಾಟೆಯಲ್ಲಿ ಗಾಯಗೊಂಡ ಇನ್ನೊಬ್ಬನ ಸ್ಥೀತಿ ಗಂಭೀರವಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನಡೆಯುತ್ತಿದೆ. ಗಲಾಟೆಯ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES