Wednesday, January 22, 2025

ಎರಡು ಗುಂಪಿನ ನಡುವೆ ಮಾರಾಮಾರಿ: ಇಬ್ಬರ ಸಾವು, ಒಬ್ಬರಿಗೆ ಗಂಭೀರ ಗಾಯ.!

ಕೊಪ್ಪಳ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ಇಬ್ಬರ ಸಾವು, ಒಬ್ಬರಿಗೆ ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಕೊಪ್ಪಳ‌ ಜಿಲ್ಲೆ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಸಾವೀಗಿಡಾದವರನ್ನು ಯಂಕಪ್ಪ ತಂ ಶ್ಯಾಮಪ್ಪ ತಳವಾರ (60), ಭಾಷಾಸಾಬ (22) ಎಂದು ಗುರುತಿಸಲಾಗಿದೆ.

ಅಲ್ಲದೇ, ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾನೆ. ಈ ಕುರಿತು ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES