Monday, December 23, 2024

ಹುಲಿಹೈದರ್‌ ಗ್ರಾಮದಲ್ಲಿ 144 ಸೆಕ್ಷನ್

ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದಲ್ಲಿ ನಿನ್ನೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಇದರಿಂದಾಗಿ ಗ್ರಾಮದ ಜನತೆ ಬೆಚ್ಚಿ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಹುಲಿಹೈದರ್‌ ಗ್ರಾಮದಲ್ಲಿ ಆಗಸ್ಟ್‌ 20ರವರೆಗೂ 144 ಸೆಕ್ಷನ್ ಜಾರಿ ಮಾಡಿದ್ದು, 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಗುರುವಾರದಂದು ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರವಾಗಿತ್ತು. ಸದ್ಯ ಅವರು ಆಸ್ಪತ್ರೆಯಲ್ಲಿ ಸಾವು- ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಮುಸ್ಲಿಂ ಸಮುದಾಯದ ಹುಡುಗಿಯರನ್ನು ಎಸ್.ಟಿ ಸಮುದಾಯದವರು ಮದುವೆಯಾಗಿದ್ದಾರೆ ಎಂಬ ವಿಚಾರಕ್ಕೆ ಗಲಾಟೆ ನಡೆದಿದೆ. ಈ ಸಂಬಂಧ ಸಚಿವ ಹಾಲಪ್ಪ ಆಚಾರ್​ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES