Wednesday, January 22, 2025

ಕಾಂಗ್ರೆಸ್ ಆರೋಪಕ್ಕೆ ಬಿ.ಸಿ.ನಾಗೇಶ್ ಸ್ಪಷ್ಟನೆ

ಬೆಂಗಳೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಷ್ಟ್ರ ಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದಿದ್ದಾರೆ ಎಂದು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಷ್ಟ್ರಧ್ವಜದ ಬಣ್ಣಗಳೇ ತಿಳಿಯದವರು ದಿಕ್ಕು ತಪ್ಪಿಸಲೆಂದೇ ಒಂದು ಚಿತ್ರವನ್ನು ಬಳಸಿಕೊಂಡು ಸುಳ್ಳಿನ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹತಾಶೆಯಿಂದ ಸುಳ್ಳು ಹೇಳುವುದನ್ನೆ ಅವರು ಅಜೆಂಡಾ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಆದರೆ, ಈ ನೈಜ ಚಿತ್ರಗಳು ಅವರ ಹಸಿ ಹಸಿ ಸುಳ್ಳುಗಳನ್ನು ಬಯಲು ಮಾಡುತ್ತವೆ ಎಂದು ಹೇಳಿದ್ದಾರೆ. ತಿಪಟೂರಿನಲ್ಲಿ ಬಿ.ಸಿ.ನಾಗೇಶ್ ತಿರಂಗಾ ಯಾತ್ರೆ ನಡೆಸುವ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಎಸಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

RELATED ARTICLES

Related Articles

TRENDING ARTICLES