Monday, December 23, 2024

ಸವದತ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ, ಇಲ್ಲದಿದ್ದರೆ ರಾಜಕೀಯ ನಿವೃತ್ತಿ.!

ಬೆಳಗಾವಿ: 2023 ರ ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭಾ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರದೇ ಇದ್ದರೆ ರಾಜಕೀಯ ನಿವೃತ್ತಿ ನೀಡುವೆ ಎಂದು ಬೆಳಗಾವಿಯ ಕಾಂಗ್ರೆಸ್ ಮುಖಂಡ ವಿಶ್ವಾಸ ವೈದ್ಯ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿ, ದಿನದಿಂದ ದಿನಕ್ಕೆ ಸವದತ್ತಿಯಲ್ಲಿ ಕಾರ್ಯಕರ್ತರ ಉತ್ಸಾಹ ಬೆಂಬಲ ಸಿಗುತ್ತಿದೆ. 30 ವರ್ಷದ ಇತಿಹಾಸದಲ್ಲಿಯೇ ಸವದತ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿಲ್ಲ. 1989ರಲ್ಲಿ ಕಾಂಗ್ರೆಸ್ ಭಾವುಟ ಹಾರಿತು
ಈಗ ಕಾರ್ಯಕರ್ತರು ಉತ್ಸಾಹ ನೋಡಿದ್ರೆ ಮುಂಬರುವ ದಿನಗಳಲ್ಲಿ ಮತ್ತೆ ಸವದತ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾವುಟ ಹಾರಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಸವದತ್ತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಹೈಕಮಾಂಡ್​ಗೆ ಬಿಟ್ಟಿದ್ದು, ಸ್ಪರ್ಧೆ ಮಾಡಬೇಕೆಂಬ ಉದ್ದೇಶ ಬಹಳ ಜನರಿಗೆ ಇದೆ. ಹೈಕಮಾಂಡ್ ನನಗೆ  ‘ಬಿ’ ಫಾರ್ಮ್ ಕೊಟ್ಟರೆ ನಾನು ಕೂಡ ಸ್ಪರ್ಧೆ ಮಾಡಲು ಸಿದ್ಧ ಎಂದರು.

ಸವದತ್ತಿ ವಿಧಾನಸಭಾ ಕ್ಷೇತ್ರಕ್ಕೆ ನನಗೆ ಟಿಕೆಟ್ ಕೊಡಬೇಕೆಂಬ ಕೂಗು ಅಭಿಮಾನಿಗಳದ್ದಾಗಿದೆ. ಹೈಕಮಾಂಡ್ ಗೆ ಎಲ್ಲವೂ ಗೊತ್ತಿದೆ, ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರೇ ನಮಗೆ ಬಾಸ್ ಅವರು ಹೇಳಿದಂಗೆ ನಡೆಯುತ್ತೇನೆ. ಸವದತ್ತಿ ಕ್ಷೇತ್ರದಲ್ಲಿ ಯಾವುದೇ ರೀತಿಯ ಭಿನ್ನಮತ ಇಲ್ಲ ಎಂದು ವಿಶ್ವಾಸ ವೈದ್ಯ ಹೇಳಿದ್ದಾರೆ.

RELATED ARTICLES

Related Articles

TRENDING ARTICLES