Sunday, December 22, 2024

ಇದು ಲಂಚ ಮಂಚದ ಸರಕಾರ : ಪ್ರೀಯಾಂಕ್ ಖರ್ಗೆ

ಕಲಬುರಗಿ : ಸರಕಾರ ಯುವಕರಿಗೆ ಉದ್ಯೋಗ ಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಪ್ರಿಯಾಂಕ ಖರ್ಗೆ ವಾಗ್ದಾಳಿ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಅತನಾಡಿದ ಅವರು, ಇದು ಲಂಚ ಮಂಚದ ಸರಕಾರ. ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕಂದ್ರೆ ಮಂಚ ಹತ್ತಬೇಕು ಎಂದು ಬಿಜೆಪಿ ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಪ್ರಿಯಾಂಕ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು, ಸರಕಾರ ಯುವಕರಿಗೆ ಉದ್ಯೋಗ ಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಯುವಕರ ಭವಿಷ್ಯದ ಜೋತೆಗೆ ಇವರು ಚೆಲ್ಲಾಟವಾಡುತ್ತಿದ್ದಾರೆ. ಈ ಸರಕಾರದಲ್ಲಿ ಪ್ರತಿಯೊಂದು ಹುದ್ದೆಗಳು ಮಾರಾಟಕ್ಕಿವೆ ಎಂದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮಗೆ ಬಿಜೆಪಿ ಅವರಿಂದಲೇ ಸಿಎಂ ಬದಲಾವಣೆ ಬಗ್ಗೆ ಮಾಹಿತಿ ಬರ್ತಿದೆ. ಬಿಜೆಪಿಯ ಸುರೇಶ್ ಗೌಡ ಅವರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಮಂತ್ರಿಮಂಡಲದ ಮೇಲೆ ಸಿಎಂ ಗೆ ಹಿಡಿತವಿಲ್ಲ. ನಳೀನ್ ಕಟೀಲ್ ಗೆ ಬಿಜೆಪಿ ಅವರ ಮೇಲೆ ಹಿಡಿತ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಅವರೇ ಬೆಂಕಿ ಹಚ್ಚುತ್ತಿದ್ದಾರೆ. ನಾವು ಬೆಂಕಿ ಹತ್ತಿದೆ ಅಂತಾ ಹೇಳಿದ್ರೆ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹೇಳಿದರು.

RELATED ARTICLES

Related Articles

TRENDING ARTICLES