Monday, December 23, 2024

ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

ಬೆಂಗಳೂರು : ಇಂದಿನಿಂದ 25-08-2022ರವರೆಗೆ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ಪ್ರದೇಶವನ್ನು ನಿಷೇಧಾಜ್ಞೆ ಹೊರಡಿಸಿದೆ.

ದಿನಾಂಕ 12-08-2022 – ಕನ್ನಡ, ಅರೇಬಿಕ್

ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ

ದಿನಾಂಕ 16-08-2022 – ಹಿಂದಿ

ದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ

ದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ

ದಿನಾಂಕ 19-08-2022 -ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ

ದಿನಾಂಕ 20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ

ದಿನಾಂಕ 22-08-2022 – ಇಂಗ್ಲೀಷ್

ದಿನಾಂಕ 23-08-2022 – ಅರ್ಥಶಾಸ್ತ್ರ, ಜೀವಶಾಸ್ತ್ರ

ದಿನಾಂಕ 24-08-2022-ಇತಿಹಾಸ, ಸಂಖ್ಯಾಶಾಸ್ತ್ರ

ದಿನಾಂಕ 25-08-2022 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿ ರಚನೆ ಮಾಡಿದ್ದು, ಸಮಿತಿಯಲ್ಲಿ ತಹಶೀಲ್ದಾರ್, ಬಿಇಒ ಮತ್ತು ಪ್ರಾಂಶುಪಾಲರು ಸದಸ್ಯರು, ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವ ವಾಹನಕ್ಕೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಕೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಪ್ರಶ್ನೆ ಪತ್ರಿಕೆಯನ್ನು ಪರೀಕ್ಷಾ ಕೇಂದ್ರಕ್ಕೆ ಸಾಗಿಸುವ ವಾಹನದೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದ್ದು, ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ.

RELATED ARTICLES

Related Articles

TRENDING ARTICLES