Monday, December 23, 2024

ಬಹುಮಹಡಿ ಕಟ್ಟಡದಿಂದ ಬಿದ್ದು ಟೆಕ್ಕಿ ಸಾವು..!

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಬಿದ್ದು ಟೆಕ್ಕಿ ಸಾವನ್ನೊಪ್ಪಿದ ಘಟನೆ ಬೆಳ್ಳಂದೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಾವಿಗೀಡಾದ ವ್ಯಕ್ತಿ ಅಸ್ಸಾಂ ಮೂಲದ ತ್ರಿದಿಪ್ ಕೊನ್ವರ್ (28) ಎನ್ನಲಾಗಿದ್ದು, ಇಂದು ಬೆಳಗ್ಗೆ 3 ಗಂಟೆ ಸುಮಾರಿಗೆ ಹತ್ತನೇ ಮಹಡಿಯ ಟೆರಸ್ ಗೆ ಹೋಗಿದ್ದಾನೆ ಈ ವೇಳೆ ಕಾಲು ಜಾರಿ ಬಿದ್ದಿದ್ದಾನೆ ಎನ್ನಲಾಗುತ್ತಿದೆ.

ಈತ ಶೋಭಾ ಡಾಲಿಯಾ ಅಪಾರ್ಟ್ಮೆಂಟ್ ನಲ್ಲಿ ವಾಸಿಸುತ್ತಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಸದ್ಯ ಘಟನಾ ಸ್ಥಳಕ್ಕೆ ಬೆಳ್ಳಂದೂರು ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES