Wednesday, January 22, 2025

ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟ ಅರೆಸ್ಟ್

ಬೆಂಗಳೂರು : ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ಉದಯೋನ್ಮುಖ ನಟ ಅರೆಸ್ಟ್ ಆಗಿದ್ದಾನೆ.

ಜೆ.ಪಿ.ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ಆರೋಪಿ ನಾಯಕನಾಗಿದ್ದ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ. ನಂತರ ಉದ್ಯಮಿಗೆ ಬೇಟಿಯಾಗಿದ್ದ ತಾವು ಕ್ರೈಂ ಪೊಲೀಸರು ಎಂದು ಹೇಳಿ ಹೆದರಿಸಿದ್ದ. ಜೊತೆಗೆ ಯುವತಿಯರ ಜೊತೆಗೆ ಅಶ್ಲೀಲ ಚಾಟ್ ಬಗ್ಗೆ ನಿಮ್ಮ ಮೇಲೆ ಕೇಸ್ ದಾಖಲಾಗಿದೆ ಎಂದು ಹೇಳಿದ್ದಾನೆ.

ಇನ್ನು, ಕೇಸ್ ಮುಂದುವರೆಸದಿರಲು ಹಣ ಕೇಳಿದ್ದು, ಮೊದಲಿಗೆ ಐವತ್ತು ಸಾವಿರ, ನಂತರ ಬ್ಯಾಂಕ್​ನಲ್ಲಿ ಮೂರು ಲಕ್ಷ ಡ್ರಾ ಮಾಡಿಸಿಕೊಂಡಿದ್ದ. ಹಂತ ಹಂತವಾಗಿ ಒಟ್ಟು 14 ಲಕ್ಷಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದ. ಹಲಸೂರು ಗೇಟ್ ಬಳಿ ಸಹ ಒಮ್ಮೆ ಹಣ ಪಡೆದಿದ್ದು, ಉದ್ಯಮಿಗೆ ಡೌಟ್ ಬಂದು ಹಲಸೂರು ಗೇಟ್ ಠಾಣೆಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

RELATED ARTICLES

Related Articles

TRENDING ARTICLES