Wednesday, January 22, 2025

ಆ. 28 ಕ್ಕೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆಗಸ್ಟ್ 28 ಕ್ಕೆ ದೊಡ್ಡಬಳ್ಳಾಪುರದಲ್ಲಿ ರಾಜ್ಯ ಸರ್ಕಾರದ ಸಾಧನೆಯ ಜನೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯ ಸರ್ಕಾರದ ಸಾಧನೆಯನ್ನು ಜನರಿಗೆ ತಲುಪಿಸಲು ರಾಜ್ಯದ ಐದು ಕಡೆಗಳಲ್ಲಿ ಜನೋತ್ಸವ ನಡೆಸಲಾಗುವುದು. ಜುಲೈ 28 ಕ್ಕೆ ಆಗಬೇಕಿದ್ದ ಜನೋತ್ಸವವನ್ನು ಅನಿವಾರ್ಯ ಕಾರಣಗಳಿಂದ ರದ್ದು ಮಾಡಲಾಗಿತ್ತು. 10-15 ದಿನಗಳಿಂದ ಈ ಭಾಗದ ಜನರ ಒತ್ತಾಯ ಹೆಚ್ಚಾಗಿದೆ. ಬೇರೆ ಕಡೆ ಸಮಾವೇಶ ಮಾಡಲು ಜನ ಒಪ್ಪಲಿಲ್ಲ. ನಾವು ಸಾಕಷ್ಟು ತಯಾರಿ ನಡೆಸಿದ್ದು ದೊಡ್ಡಬಳ್ಳಾಪುರ ದಿಂದಲೇ ಜನೋತ್ಸವ ಪ್ರಾರಂಭವಾಗಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಈಗಾಗಲೇ ಮೊದಲ ಹೆಜ್ಜೆ ಇಟ್ಟಿದ್ದೇವೆ. ಇಲ್ಲಿಂದಲೇ ಜನೋತ್ಸವ ಆರಂಭ ಆಗಲಿ ಎಂದು ನಮಗಿಂತಲೂ ಹೆಚ್ಚಿನ ಧೃಢ ನಿರ್ಧಾರ ಕಾರ್ಯಕರ್ತರದ್ದಾಗಿದೆ ಅವರ ಉತ್ಸಾಹ ನಿರ್ಣಯಕ್ಕೆ ತಲೆಬಾಗಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು. ಜನೋತ್ಸವದ ಬಗ್ಗೆ ಇಂದು ವರಿಷ್ಠ ರೊಂದಿಗೆ ಮಾತನಾಡಿ ತಿಳಿಸಲಾಗುವುದು ಎಂದರು.

RELATED ARTICLES

Related Articles

TRENDING ARTICLES