Wednesday, January 22, 2025

‘ಅಂಗಾಂಗ ದಾನಕ್ಕೆ ಸಿಎಂ ಕರೆ’

ಬೆಂಗಳೂರು : ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸತ್ತ ಮೇಲೆ ನಮ್ಮ ದೇಹದಾನದಿಂದ 8 ಜನ ಬದುಕುತ್ತಾರೆ..ಮಾನವ ಜನ್ಮ ಶ್ರೇಷ್ಠವಾದದ್ದು. ಅದನ್ನು ಉಳಿಸುವ ಕೆಲಸ ಮಾಡಬೇಕಿದೆ. ಸಾಧಕನಿಗೆ ಸಾವಿಲ್ಲ, ಸಾವಿನ ನಂತರವು ಬದುಕಬಹುದು. ಇದೇ ರೀತಿಯಲ್ಲಿ ಅಂಗಾಂಗ ದಾನದ ಮೂಲಕ ಸತ್ತನಂತರವೂ ಬದುಕಬಹುದು.

ಇನ್ನು, ರಾಜ್ಯಾದ್ಯಂತ 18 ಕೇಂದ್ರಗಳಿದ್ದು, ಈ ಕೇಂದ್ರಗಳಲ್ಲಿ ಅಂಗಾಂಗ ದಾನ ಮಾಡಲು ಇಚ್ಛಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ಮುಂದಾಗಬೇಕು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಮಾಡಿದ್ದೇನೆ ಎಂದರು.

RELATED ARTICLES

Related Articles

TRENDING ARTICLES