Monday, December 23, 2024

ಸಿಎಂ ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ ಪತ್ರ

ನವದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ವ್ಯಕ್ತಿಯೊಬ್ಬ ಪತ್ರದಲ್ಲಿ ಬಾಂಬ್ ಬೆದರಿಕೆ ಹಾಕಿದ್ದಾನೆ ಎಂದು ವರದಿಗಳು ತಿಳಿಸಿವೆ.

ಲಕ್ನೋದ ಆಲಂಬಾಗ್ ಪ್ರದೇಶದ ನಿವಾಸಿ ದೇವೇಂದ್ರ ತಿವಾರಿ ಎಂಬುವವರ ಮನೆಯಲ್ಲಿ ಬ್ಯಾಗ್‌ನಲ್ಲಿ ಸಿಎಂಗೆ ಬಾಂಬ್​ ಬೆದರಿಕೆ ಹಾಕಿರುವ ಪತ್ರ ಪತ್ತೆಯಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ದೇವೇಂದ್ರ ತಿವಾರಿ ಇಬ್ಬರನ್ನೂ ಸ್ಫೋಟಿಸುವುದಾಗಿ ಪತ್ರದಲ್ಲಿ ಬರೆಯಲಾಗಿದೆ.

10 ದಿನಗಳ ಅವಧಿಯಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಗೆ ಇದು ಎರಡನೇ ಕೊಲೆ ಬೆದರಿಕೆ ಆಗಿದೆ. ಆಗಸ್ಟ್ 8 ರಂದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ವಾಟ್ಸಾಪ್ ಸಂದೇಶ ಬಂದ ನಂತರ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಲಕ್ನೋ ಪೊಲೀಸರು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES