Wednesday, September 18, 2024

ಭಾರತ-ಪಾಕ್ ಗಡಿಭಾಗದಲ್ಲಿ ಪರಸ್ಪರ ಸಿಹಿ ವಿನಿಮಯ ಮಾಡಿದ ಯೋಧರು.!

ನವದೆಹಲಿ ; ಅಗಸ್ಟ್​ 15 (ನಾಳೆ) ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಅಟ್ಟಾರಿ-ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ ಪಡೆಗಳು ಭಾರತ ಮತ್ತು ಪಾಕಿಸ್ತಾನ ಯೋಧರು ಪರಸ್ಪರ ಸಿಹಿ ಹಂಚಿಕೊಂಡು ಸ್ವಾತಂತ್ಯೋತ್ಸವದ ಶುಭಾಶಯ ಕೋರಿದರು.

ಭಾರತವು ತನ್ನ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲು ಸಿದ್ಧವಾಗಿರುವಾಗ ಭಾರತೀಯ ಸೈನಿಕರು ತಮ್ಮ ಪಾಕಿಸ್ತಾನಿ ಸಹವರ್ತಿಗಳಿಗೆ ಶುಭಾಶಯಗಳನ್ನು ಮತ್ತು ಸಿಹಿತಿಂಡಿಗಳನ್ನು ನೀಡುವುದನ್ನು ಕಾಣಬಹುದು.

ಅಂತಾರಾಷ್ಟ್ರೀಯ ಗಡಿಯ ಶೂನ್ಯ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ಸೈನಿಕರು ಸಿಹಿ ವಿನಿಮಯ ಮಾಡಿಕೊಂಡರು. ಅಗಸ್ಟ್​ 16 ರಂದು ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತದ ಬಿಎಸ್‌ಎಫ್ ಯೋಧರಿಗೆ ಪಾಕಿಸ್ತಾನದ ಯೋಧರು ಸಿಹಿಯನ್ನು ಹಂಚಿದರು. ಎರಡೂ ಕಡೆಯ ಭದ್ರತಾ ಸಿಬ್ಬಂದಿ ಪರಸ್ಪರ ಕೈಕುಲುಕಿ ಕ್ಯಾಮರಾಗಳಿಗೆ ಪೋಸ್ ನೀಡಿದರು. ಸಿಹಿ ವಿನಿಮಯ ಮಾಡಿಕೊಂಡ ಬಳಿಕ ಉಭಯ ರಾಷ್ಟ್ರಗಳ ಸೈನಿಕರು ಅಂತಾರಾಷ್ಟ್ರೀಯ ಗಡಿಯಲ್ಲಿ ಗೇಟ್‌ಗಳನ್ನು ಮುಚ್ಚಿದರು.

RELATED ARTICLES

Related Articles

TRENDING ARTICLES