Friday, May 17, 2024

9 ನೇ ಬಾರಿಗೆ ಕೆಂಪು ಕೋಟೆ ಮೇಲೆ ಧ್ವಜಾರೋಹಣ ಮಾಡಿದ ಮೋದಿ.!

ನವದೆಹಲಿ: ಇಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೆಂಪು ಕೋಟೆಯಲ್ಲಿ ಸತತ 9 ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಮಾಡಿ ಭಾಷಣ ಮಾಡಿದರು.

ಭಾಷಣಕ್ಕೂ ಮೊದಲು ತಮ್ಮ ಅಧಿಕೃತ ನಿವಾಸದ ಮೂಲಕ ಲೋಕ ಕಲ್ಯಾಣ್ ಮಾರ್ಗನಿಂದ ತೆರಳಿ ರಾಜ್ ಘಾಟ್ ನಲ್ಲಿರುವ ಮಹಾತ್ಮ ಗಾಂಧೀಜಿ ಸಮಾಧಿಗೆ ತೆರಳಿ ಪುಷ್ಪಾರ್ಚನೆ ಮಾಡಿದರು.

ಈ ವೇಳೆ ಪ್ರಧಾನಿಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಿಡಿಎಸ್ ಮತ್ತು ಮೂರು ರಕ್ಷಣಾ ಪಡೆಯ ಮುಖ್ಯಸ್ಥರು ಸ್ವಾಗತಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕೊಸ್ಕರ ಮಡಿದ ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

RELATED ARTICLES

Related Articles

TRENDING ARTICLES