Wednesday, January 22, 2025

ಕೇಂದ್ರದ ವಿರುದ್ಧ ಸೋನಿಯಾ ಗಾಂಧಿ ಗುಡುಗು.!

ನವದೆಹಲಿ : ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಸಂಭ್ರಮದ ವಾತಾವರಣವಿದೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ 75ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ.

75 ವರ್ಷಗಳಲ್ಲಿ ದೇಶ ಹಲವಾರು ಸಾಧನೆಗಳನ್ನು ಮಾಡಿದೆ. ಆದರೆ ಇಂದಿನ ಕೇಂದ್ರ ಸರ್ಕಾರ ಸ್ವಾತಂತ್ರ್ಯ ಹೋರಾಟಗಾರರ ಮಹಾನ್ ತ್ಯಾಗ ಮತ್ತು ದೇಶದ ಅಮೋಘ ಸಾಧನೆಗಳನ್ನು ಕ್ಷುಲ್ಲಕಗೊಳಿಸಲು ಹೊರಟಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಳೆದ 75 ವರ್ಷಗಳಲ್ಲಿ ದೇಶವು ತನ್ನ ಪ್ರತಿಭಾವಂತ ಭಾರತೀಯರ ಕಠಿಣ ಪರಿಶ್ರಮದ ಬಲದಿಂದ ವಿಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಅಂತಾರಾಷ್ಟ್ರೀಯ ರಂಗದಲ್ಲಿ ಅಳಿಸಲಾಗದ ಛಾಪು ಮೂಡಿಸಿದೆ. ದೇಶವು ತನ್ನ ದೂರದೃಷ್ಟಿಯ ನಾಯಕರ ನೇತೃತ್ವದಲ್ಲಿ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ಸ್ಥಾಪಿಸಿತು. ಅದು ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಸಂಸ್ಥೆಗಳನ್ನು ಬಲಪಡಿಸುತ್ತದೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES